
ಬೆಂಗಳೂರು: ವಿವಾದಿತ ಭೂ ಸುಧಾರಣೆ, ಕೃಷಿ, ಎಪಿಎಂಸಿ ಕಾಯ್ದೆಗೆ ಸರ್ಕಾರದಿಂದ ಮತ್ತೆ ಸುಗ್ರೀವಾಜ್ಞೆ ಹೊರಡಿಸಲಾಗುವುದು.
ವಿಧಾನಪರಿಷತ್ತಿನಲ್ಲಿ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ ಸಿಗದ ಹಿನ್ನೆಲೆಯಲ್ಲಿ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಒಬ್ಬರಿಗೆ 54 ಎಕರೆ, 5 ಜನರ ಕುಟುಂಬಕ್ಕೆ 108 ಎಕರೆ ಜಮೀನು ಖರೀದಿಗೆ ಒಪ್ಪಿಗೆ ನೀಡಲಾಗುವುದು ಎನ್ನಲಾಗಿದೆ.
ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಮತ್ತು ಕೈಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಕಾಯ್ದೆಗಳಿಗೆ ವಿಧಾನಪರಿಷತ್ತಿನಲ್ಲಿ ಒಪ್ಪಿಗೆ ಸಿಗದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಆದೇಶ ಹೊರಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.