ಬೆಂಗಳೂರು: ಅಕ್ಟೋಬರ್ 15 ರ ನಂತರ ಶಾಲಾ, ಕಾಲೇಜು ಆರಂಭಿಸುವ ಕುರಿತಂತೆ ಅಕ್ಟೋಬರ್ 10 ರ ನಂತರ ತೀರ್ಮಾನ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.
ಈ ಕುರಿತಂತೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಕೊರೋನಾ ಇನ್ನೂ ಇರುವುದರಿಂದ ಶಾಲೆಗಳ ಆರಂಭಕ್ಕೆ ಆತುರವಿಲ್ಲ. ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಮಕ್ಕಳ ಆರೋಗ್ಯದ ಕಾಳಜಿಯೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತಂತೆ ಅಕ್ಟೋಬರ್ 10ಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಅಕ್ಟೋಬರ್ 15 ರ ನಂತರ ಶಾಲೆ, ಕಾಲೇಜುಗಳ ಆರಂಭಕ್ಕೆ ಸಮ್ಮತಿ ಸೂಚಿಸಿದೆ. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಶಿಕ್ಷಣ ತಜ್ಞರು, ಜನಪ್ರತಿನಿಧಿಗಳು, ಉಪನ್ಯಾಸಕರು, ಪೋಷಕರೊಂದಿಗೆ ಚರ್ಚಿಸಿ ಶಾಲೆ ಆರಂಭದ ಬಗ್ಗೆ ತೀರ್ಮಾನಿಸಲಿದೆ. ಸದ್ಯಕ್ಕಂತೂ ಶಾಲೆಗಳ ಆರಂಭಕ್ಕೆ ಆತುರವಿಲ್ಲ ಎಂದು ಹೇಳಲಾಗಿದೆ.