ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಕುವಳ್ಳಿ ಗ್ರಾಮದಲ್ಲಿ 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ದೊಡ್ಡಮ್ಮನ ಮಗನಿಂದ ಅತ್ಯಾಚಾರಕ್ಕೆ ಒಳಗಾದ ಬಾಲಕಿ ಡೆತ್ ನೋಟ್ ನಲ್ಲಿ ವಿಷಯ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ ರಾಘವೇಂದ್ರ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಬಂಧ ಬೆಳೆಸಿದ್ದಾನೆ.
ಬಾಲಕಿ 5 ತಿಂಗಳ ಗರ್ಭಿಣಿ ಎಂಬುದು ಗೊತ್ತಾಗುತ್ತಿದ್ದಂತೆ ಪರಾರಿಯಾಗಿದ್ದಾನೆ. ತನ್ನ ದೊಡ್ಡಮ್ಮನ ಮಗನಿಂದ ಅತ್ಯಾಚಾರಕ್ಕೆ ಒಳಗಾದ ಬಗ್ಗೆ ಡೆತ್ ನೋಟ್ ನಲ್ಲಿ ಬರೆದಿಟ್ಟ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡೆತ್ ನೋಟ್ ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.