ಕೊರೊನಾ ಮಹಾಮಾರಿಯ ಆರ್ಭಟ ಇನ್ನೂ ನಿಂತಿಲ್ಲ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದೆರಡು ದಿನಗಳಿಂದ 10 ಸಾವಿರದವರೆಗೆ ಕೇಸ್‌ಗಳು ದಾಖಲಾಗುತ್ತಿವೆ. ಇತ್ತ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಾಕಷ್ಟು ಕ್ರಮ ಕೈಗೊಂಡರೂ ಸೋಂಕು ಹರಡುವಿಕೆ ನಿಂತಿಲ್ಲ. ಇದೆಲ್ಲದರ ಮಧ್ಯೆ ಸೋಂಕಿತರಲ್ಲಿ ಲಕ್ಷಣ ರಹಿತ ಸೋಂಕಿತರೇ ಹೆಚ್ಚಾಗುತ್ತಿದ್ದಾರೆ.
ಹೌದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾದ ಬೆನ್ನಲ್ಲೇ ಲಕ್ಷಣ ರಹಿತ ಸೋಂಕಿತರು ಹೆಚ್ಚಾಗುತ್ತಿದ್ದಾರೆ. ಒಟ್ಟು 97 ರಷ್ಟು ಜನರಿಗೆ ಕೊರೊನಾ ಸೋಂಕಿನ ಲಕ್ಷಣಗಳೆ ಇಲ್ಲ ಎಂದು ಹೇಳಲಾಗುತ್ತಿದೆ. ಸೋಂಕಿನ ಲಕ್ಷಣಗಳು ಇಲ್ಲದೇ ಇರೋದೆ ಸೋಂಕು ಹೆಚ್ಚಳಕ್ಕೆ ಕಾರಣವಾಗಿರಬಹುದು. ಆಗಷ್ಟ್ ತಿಂಗಳಲ್ಲಿಯೂ ಸೋಂಕಿತರು ಹೆಚ್ಚಾಗಿ ಪತ್ತೆಯಾಗಿದ್ದರು. ಸುಮಾರು 2 ಲಕ್ಷ ಸೋಂಕಿತರು ಪತ್ತೆಯಾಗಿದ್ದು ಇವರಲ್ಲಿ 80 ರಷ್ಟು ಜನಕ್ಕೆ ಸೋಂಕಿನ ಲಕ್ಷಣಗಳೇ ಇಲ್ಲ ಎನ್ನಲಾಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಲಕ್ಷಣ ರಹಿತ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇವರನ್ನು ಪರೀಕ್ಷೆಗೆ ಒಳಪಡಿಸಿದಾಗ ಮಾತ್ರ ಸೋಂಕು ಇರುವುದು ಧೃಡಪಟ್ಟಿದೆ. ಇದು ಆರೋಗ್ಯ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.