ರಾಜಸ್ಥಾನದಲ್ಲಿ ಸೆಕ್ಸ್ ರಾಕೆಟ್ ಬಣ್ಣ ಬಯಲಾಗಿದೆ. ಅಪ್ರಾಪ್ತೆಯರನ್ನು ವೇಶ್ಯಾವಾಟಿಕೆಗೆ ತಳ್ಳಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಯರನ್ನು ನಂಬಿಸಿ ಈ ದಂಧೆಗೆ ಹಾಕಲಾಗ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಪ್ರಕರಣದಲ್ಲಿ ದೊಡ್ಡವರ ಕೈವಾಡವಿರುವುದು ಗೊತ್ತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಬಂಧಿಸಲಾಗಿದೆ. ಬಿಜೆಪಿಯ ಮಾಜಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನೀತಾ ವರ್ಮಾಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಸೇವಾ ದಳದ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಪೂನಂ ಚೌಧರಿ ಪರಾರಿಯಾಗಿದ್ದಾಳೆ.
ಪ್ರಕರಣದಲ್ಲಿ ಇನ್ನೂ ಹಲವು ಹೆಸರುಗಳು ಬಹಿರಂಗವಾಗುವ ಸಾಧ್ಯತೆಯಿದೆ. ಈ ವಿಷಯ ಬೆಳಕಿಗೆ ಬಂದ ನಂತರ ಬಿಜೆಪಿ ಆರೋಪಿ ಸುನೀತಾ ವರ್ಮಾಳನ್ನು ಹುದ್ದೆಯಿಂದ ವಜಾ ಮಾಡಲಾಗಿದೆ. ಪ್ರಕರಣದ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.