alex Certify ಉದ್ಯೋಗಾಕಾಂಕ್ಷಿಗಳೇ ಗಮನಿಸಿ: SBI ಕೆಲಸಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: SBI ಕೆಲಸಕ್ಕೆ ಅರ್ಜಿ ಆಹ್ವಾನ

ಬ್ಯಾಂಕ್‌ನಲ್ಲಿ ಕೆಲಸ ಮಾಡಲು ಇಚ್ಚಿಸುವ ಹಾಗೂ ವಿದ್ಯಾರ್ಹತೆ ಹೊಂದಿರುವವರಿಗೊಂದು ಎಸ್‌ಬಿಐ ಸುವರ್ಣಾವಕಾಶವನ್ನು ನೀಡಿದೆ. ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಮತ್ತು ಮ್ಯಾನೇಜರ್‌ನ ಒಟ್ಟು 34 ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಿದೆ. ಅರ್ಜಿ ಸಲ್ಲಿಸೋದಿಕ್ಕೆ ಎಸ್‌ಬಿಐನ ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಬಹುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪದವಿ, ಎಂಬಿಎ-ಪಿಜಿಡಿಎಂ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿಯ ನಂತರ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಇಲ್ಲಿ ಸೆಲೆಕ್ಟ್ ಆದವರನ್ನು ಸಂದರ್ಶನ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ. ಈ ರೀತಿ ಆಯ್ಕೆ ಪ್ರಕ್ರಿಯೆ ಇರುತ್ತದೆ. ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯಸ್ಸಿನವರು ಅರ್ಹರಾಗಿರುತ್ತಾರೆ.

ಇನ್ನು ಅರ್ಜಿ ಶುಲ್ಕ ವಿಧಿಸಲಾಗಿದೆ. ಸಾಮಾನ್ಯ, ಓಬಿಸಿ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 750 ರೂಪಾಯಿ ಆನ್‌ಲೈನ್ ಮೂಲಕ ಪಾವತಿಸಬೇಕು. ಪ.ಜಾ, ಪ.ಪಂ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಅರ್ಜಿ ಸಲ್ಲಿಸೋದಿಕ್ಕೆ ಕೊನೆಯ ದಿನಾಂಕ ಅಕ್ಟೋಬರ್ 8. ಇನ್ನು ಈ ಹುದ್ದೆಗಳಿಗೆ ಆಕರ್ಷಕ ಸಂಬಳ ಇರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...