ನವದೆಹಲಿ: ಕೃಷಿ ಬಜೆಟ್ 11 ಪಟ್ಟು ಹೆಚ್ಚಾಗಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಬಗ್ಗೆ ಇರುವ ಬದ್ಧತೆಯನ್ನು ತೋರಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಹೇಳಿದ್ದಾರೆ.
2009 -10 ರಲ್ಲಿ ಯುಪಿಎ ಆಡಳಿತದ ಸಂದರ್ಭದಲ್ಲಿ ಕೃಷಿ ಬಜೆಟ್ ಮೊತ್ತ 12 ಸಾವಿರ ಕೋಟಿ ರೂಪಾಯಿ ಇತ್ತು. ಅದನ್ನು 11 ಪಟ್ಟು ಹೆಚ್ಚಿಸಲಾಗಿದ್ದು 1.34 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ.
ಕೃಷಿ ಬಜೆಟ್ ಮೊತ್ತವವನ್ನು ಹೆಚ್ಚಳ ಮಾಡುವ ಮೂಲಕ ಬೆಂಬಲ ಬೆಲೆ ಯೋಜನೆಯಡಿ ಆಹಾರಧಾನ್ಯ ಮತ್ತು ಇತರೆ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲಾಗುತ್ತಿದೆ. ಹೊಸ ಕೃಷಿ ಕಾನೂನುಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಬೇರೆ ರಾಜ್ಯಗಳಲ್ಲಿಯೂ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಸಿಗಲಿದೆ ಎಂದು ತಿಳಿಸಿದ್ದಾರೆ.