alex Certify BIG BREAKING: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನಿವಾಸದ ಮೇಲೆ ಸಿಬಿಐ ರೇಡ್ – ಬೆಳ್ಳಂಬೆಳಿಗ್ಗೆಯೇ ಟ್ರಬಲ್‌ ಶೂಟರ್‌ ಗೆ ಟ್ರಬಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನಿವಾಸದ ಮೇಲೆ ಸಿಬಿಐ ರೇಡ್ – ಬೆಳ್ಳಂಬೆಳಿಗ್ಗೆಯೇ ಟ್ರಬಲ್‌ ಶೂಟರ್‌ ಗೆ ಟ್ರಬಲ್

ಇಂದು ಬೆಳ್ಳಂಬೆಳಿಗ್ಗೆಯೇ ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸಕ್ಕೆ ಸಿಬಿಐ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಡಿ.ಕೆ. ಶಿವಕುಮಾರ್‌ ಈ ಹಿಂದೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೊಳಪಟ್ಟು ಬಂಧನಕ್ಕೊಳಗಾಗಿದ್ದರು. ಬಳಿಕ ಡಿಕೆಶಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

ಇದೀಗ ಸಿಬಿಐ ಅಧಿಕಾರಿಗಳು ಡಿಕೆಶಿ ನಿವಾಸದ ಮೇಲೆ ಬೆಳಿಗ್ಗೆ 6 ಗಂಟೆ ಸುಮಾರಿಗೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು, ಡಿಕೆಶಿ ಅವರ ಸದಾಶಿವನಗರ ನಿವಾಸದ ಜೊತೆಗೆ ಅವರಿಗೆ ಸಂಬಂಧಪಟ್ಟ ಇತರೆ ಕೆಲವು ಸ್ಥಳಗಳ ಮೇಲೂ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...