ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಅವರ ಸಹೋದರ, ಸಂಸದ ಡಿ.ಕೆ. ಸುರೇಶ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳ ತಂಡ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದೆ. ಐಟಿ, ಇಡಿ ವಿಚಾರಣೆ ಎದುರಿಸಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಸಿಬಿಐ ಶಾಕ್ ನೀಡಿದೆ.
ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ ಸದಾಶಿವ ನಗರ ನಿವಾಸ, ಡಿ.ಕೆ. ಸುರೇಶ್ ಅವರ ಕನಕಪುರ ನಿವಾಸ, ಸೇರಿ ವಿವಿಧೆಡೆ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.
ಹೈಕೋರ್ಟ್ ನಲ್ಲಿ ಸಿಬಿಐ ತನಿಖೆಗೆ ತಡೆ ಕೋರಿ ಡಿಕೆಶಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಜಾಗೊಂಡಿದ್ದ ಹಿನ್ನಲೆಯಲ್ಲಿ ಬೆಂಗಳೂರು ಸಿಬಿಐ ಘಟಕದಿಂದ ಇವತ್ತು ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ ಎನ್ನಲಾಗಿದೆ. ಆದಾಯ ಮೀರಿ ಅಕ್ರಮ ಆಸ್ತಿ ಸಂಪಾದನೆ ವಿಚಾರಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ನಡೆಸಿ ಸಿಬಿಐ ಜೊತೆ ಮಾಹಿತಿ ಹಂಚಿಕೊಂಡಿದ್ದ ಹಿನ್ನಲೆಯಲ್ಲಿ ದಾಳಿ ನಡೆಸಿ ಪರಿಶಿಲನೆ ನಡೆಸಲಾಗಿದೆ. ಮಾಹಿತಿ ಆಧರಿಸಿ ಎಫ್ಐಆರ್ ದಾಖಲಿಸಿ ತನಿಖೆ ಮುಂದುವರೆಸಲಾಗುವುದು ಎನ್ನಲಾಗಿದೆ.