alex Certify ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ ಕಾಜಲ್ ಅಗರ್ವಾಲ್: ಹುಡುಗ ಯಾರು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ ಕಾಜಲ್ ಅಗರ್ವಾಲ್: ಹುಡುಗ ಯಾರು ಗೊತ್ತಾ…?

ಮುಂಬೈ: ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಇನ್ನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಈ ಕುರಿತು ಸ್ವತಃ ಕಾಜಲ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಅಕ್ಟೋಬರ್ 30ರಂದು ಗೌತಮ್ ಕಿಚ್ಲು ಎಂಬುವವರೊಂದಿಗೆ ತಾವು ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವುದಾಗಿ ಕಾಜಲ್ ಅಗರ್ವಾಲ್ ತಿಳಿಸಿದ್ದಾರೆ.

ತಮ್ಮ ಮದುವೆ ಮುಂಬೈನಲ್ಲಿ ನಡೆಯಲಿದ್ದು, ಕುಟುಂಬದವರು ಹಾಗೂ ಆಪ್ತರ ಸಮ್ಮುಖದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.

ಕೊರೊನಾದಂತಹ ಈ ಬಿಕ್ಕಟ್ಟಿನ ಸಂದರ್ಭ ನಮ್ಮ ಮದುವೆ ಸಂಭ್ರಮದ ಮೇಲೂ ಪರಿಣಾಮ ಬೀರುತ್ತಿದೆ. ಹಾಗಾಗಿ ನಾವು ಸರಳವಾಗಿ ವಿವಾಹವಾಗುತ್ತಿದ್ದು, ಹೊಸ ಜೀವನಕ್ಕೆ ಮುಂದಡಿಯಿಡುತ್ತಿರುವ ನಮಗೆ ಎಲ್ಲರೂ ಆಶೀರ್ವದಿಸಿ ಹಾರೈಸಿ ಎಂದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...