ಅಕ್ಟೋಬರ್ 15ರಿಂದ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶಾಲಾ – ಕಾಲೇಜುಗಳನ್ನು ಆರಂಭಿಸಲು ಆರಂಭಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಹೀಗಾಗಿ ಅಂದಿನಿಂದ ರಾಜ್ಯದಲ್ಲೂ ಶಾಲೆಗಳನ್ನು ಆರಂಭಿಸಲಾಗುತ್ತಾದಾ ಎಂಬ ಪ್ರಶ್ನೆ ಮೂಡಿತ್ತು.
ಆದರೆ ತರಾತುರಿಯಲ್ಲಿ ಅಕ್ಟೋಬರ್ 15ರಿಂದ ಶಾಲಾ – ಕಾಲೇಜುಗಳನ್ನು ಆರಂಭಿಸುವ ಕುರಿತು ರಾಜ್ಯ ಸರ್ಕಾರ ತೀರ್ಮಾನಿಸುವುದಿಲ್ಲ ಎಂದು ಹೇಳಲಾಗಿದೆ. ಹೀಗಾಗಿಯೇ ತಜ್ಞರು ಹಾಗೂ ಪೋಷಕರ ಜೊತೆ ಚರ್ಚೆಗಳನ್ನು ನಡೆಸಲಾಗುತ್ತಿದ್ದು, ಆ ಬಳಿಕವೇ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕೊರೊನಾ ಸೋಂಕಿಗೊಳಗಾಗಿ ಕ್ವಾರಂಟೈನ್ ನಲ್ಲಿದ್ದು, ಇಂತಹ ಸಂದರ್ಭದಲ್ಲೂ ತಜ್ಞರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಸಮಾಲೋಚನೆ ನಡೆಸುತ್ತಿದ್ದಾರೆ. ಶಾಲಾ – ಕಾಲೇಜುಗಳನ್ನು ಆರಂಭಿಸುವ ಸಾಧಕ – ಬಾಧಕಗಳ ಪರಿಶೀಲನೆ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.