ಭಾರತದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೂತನ ಅಧ್ಯಕ್ಷರನ್ನಾಗಿ ದಿನೇಶ್ ಕುಮಾರ್ ಖಾರ್ ಅವರನ್ನು ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಇಂದಿನಿಂದ ದಿನೇಶ್ ಕುಮಾರ್, ರಜನೀಶ್ ಕುಮಾರ್ ಅವರ ಸ್ಥಾನದಲ್ಲಿ ಮುಂದುವರೆಯಲಿದ್ದು, ಮೂರು ವರ್ಷಗಳ ಕಾಲ ಸ್ಟೇಟ್ ಬ್ಯಾಂಕ್ ಅಧ್ಯಕ್ಷರಾಗಿ ದಿನೇಶ್ ಕುಮಾರ್ ಕಾರ್ಯ ನಿರ್ವಹಿಸಲಿದ್ದಾರೆ.
1984 ರಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರ್ಪಡೆಗೊಂಡಿದ್ದ ದಿನೇಶ್ ಕುಮಾರ್ ಹಂತ ಹಂತವಾಗಿ ಬಡ್ತಿ ಪಡೆಯುತ್ತಾ ಇದೀಗ ಉನ್ನತ ಹುದ್ದೆ ಅಲಂಕರಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೊತೆ ಐದು ಬ್ಯಾಂಕ್ ಗಳ ವಿಲೀನ ಸಂದರ್ಭದಲ್ಲಿ ದಿನೇಶ್ ಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು.