alex Certify ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

ದಾವಣಗೆರೆ: 2020-21ನೇ ಸಾಲಿನಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳಿಗೆ ಸಾಲ ಸೌಲಭ್ಯ  ನೀಡಲು ಆನ್‍ಲೈನ್  ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಅಗತ್ಯ ದಾಖಲೆಗಳೊಂದಿಗೆ kacdc.karnataka.gov.in ಇಲ್ಲಿ ನ. 15 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ. ಆನ್‍ಲೈನ್ ಮುಖಾಂತರ ಮಾತ್ರ ಅರ್ಜಿಗಳನ್ನು ಸ್ವೀಕರಿಸಲಾಗುವುದು.

ನಿಗಮದ ಯೋಜನೆಗಳಿಗೆ ಅವಶ್ಯವಿರುವ ಸಾಮಾನ್ಯ ಅರ್ಹತೆಗಳು: ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು. ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ: ಈ ಯೋಜನೆಯಲ್ಲಿ ಸಣ್ಣ ವ್ಯಾಪಾರ, ಸ್ವಯಂ ಉದ್ಯೋಗ ಇತ್ಯಾದಿ ವ್ಯಾಪಾರ ಚಟುವಟಿಕೆಗಳಿಗೆ ಸಾಲ ನೀಡಲಾಗುವುದು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ  3 ಲಕ್ಷ ರೂ. ಮಿತಿಯ ಒಳಗಿರಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆ: ಈ ಯೋಜನೆಯಲ್ಲಿ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ C.E.T/NEET  ಮೂಲಕ ಆಯ್ಕೆಯಾಗಿ ಮತ್ತು ವೃತ್ತಿಪರ ಪಿ.ಎಚ್.ಡಿ., ಕೋರ್ಸ್‍ನಲ್ಲಿ  ವ್ಯಾಸಂಗ ಮಾಡುವವರಿಗೆ ಅರಿವು ಶೈಕ್ಷಣಿಕ ಸಾಲ ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6 ಲಕ್ಷ ರೂ. ಮಿತಿಯೊಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಪ್ರಾಂಶುಪಾಲರಿಂದ ದೃಢೀಕರಿಸಿದ ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ ಮತ್ತು ನಿಗದಿತ ಶುಲ್ಕ ನಮೂನೆ ಪತ್ರ ಹೊಂದಿರಬೇಕು. ಮಹಿಳೆಯರಿಗೆ ಶೇ.33 ರಷ್ಟು ಮತ್ತು ವಿಶೇಷಚೇತನರಿಗೆ ಶೇ.5 ರಷ್ಟು ಮೀಸಲಾತಿ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ  ಕಚೇರಿ ದೂ.ಸಂ: 91 9448451111, ಯೋಜನೆಗಳ ಮಾರ್ಗಸೂಚಿಗಳು ಹಾಗೂ ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು kacdc.karnataka.gov.in ದೂ.ಸಂ: 08192-230934 ನ್ನು ಅಥವಾ ಇಮೇಲ್ support.kacdc@karnataka.gov.in ಸಂಪರ್ಕಿಸಬಹುದೆಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...