alex Certify ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೇ ಎಂದು ಪ್ರಶ್ನಿಸಿದ ಮಾಜಿ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೇ ಎಂದು ಪ್ರಶ್ನಿಸಿದ ಮಾಜಿ ಸಿಎಂ

ಬೆಂಗಳೂರು: ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ‘ಹರ ಮುನಿದರೂ ಗುರು ಕಾಯ್ವನು’ ಎಂಬುದನ್ನು ಸರಕಾರ ಮರೆಯಬಾರದು ಎಂದು ಹೇಳಿದ್ದಾರೆ.

ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಕುಮಾರಸ್ವಾಮಿ, ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ, ಶಾಪಕ್ಕೆ ಗುರಿಯಾಗುತ್ತಿದೆ. ಸರಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿದೆ.

ಈ ವರ್ಷದ ಅಕ್ಟೋಬರ್‌ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಕೊರೊನಾ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ ಎಂದು ಕೇಳಿದ್ದಾರೆ.

ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...