ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹಳೆ ಇಕ್ಕೇರಿ ಸಮೀಪದ ಕಸಕಸೆ ಗ್ರಾಮದಲ್ಲಿ ತಾಯಿ ಮತ್ತು ಮಗನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಬಂಗಾರಮ್ಮ(62), ಪ್ರವೀಣ್(32) ಕೊಲೆಯಾದವರು ಎಂದು ಗುರುತಿಸಲಾಗಿದೆ. ಇವತ್ತು ಬೆಳಗಿನ ಜಾವ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇಬ್ಬರನ್ನು ಕೊಲೆ ಮಾಡಿ ಮೊಬೈಲ್ ಹಾಗೂ ಹಣ ದೋಚಿ ಪರಾರಿಯಾಗಿದ್ದಾರೆ.
ಪ್ರವೀಣನ ಪತ್ನಿ ಮತ್ತು 10 ತಿಂಗಳ ಮಗುವಿನ ಎದುರಲ್ಲೇ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.