ಶಿಕ್ಷಕರಿಗೆ ಗುಡ್ ನ್ಯೂಸ್ ಇಲ್ಲಿದೆ. ಮಧ್ಯಂತರ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮಕ್ಕಳು, ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಇಂದಿನಿಂದ ರಜೆ ಘೋಷಣೆ ಮಾಡಿದೆ.
ರಾಜ್ಯದ ಶಿಕ್ಷಕರಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ ನೀಡಲಾಗಿದೆ. ಮೂರು ವಾರಗಳ ಕಾಲ ಮಧ್ಯಂತರ ರಜೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 12 ರ ಇಂದಿನಿಂದ 30 ರವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ನೀಡಲಾಗಿದೆ.
ಹಲವಾರು ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗಿರುವುದನ್ನು ಗಮನಿಸಿದ್ದು ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಆರೋಗ್ಯದ ದೃಷ್ಟಿಯಿಂದ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಕೂಡ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.