ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ತನಗೆ ಸ್ಲಿಪ್ ಡಿಸ್ಕ್ ಆಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಡ್ರಗ್ಸ್ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ, ಎನ್ ಡಿ ಪಿ ಎಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಸ್ಲಿಪ್ ಡಿಸ್ಕ್ ಹಿನ್ನೆಲೆಯಲ್ಲಿ ಬೆನ್ನು ನೋವಿನಿಂದ ಬಳಲುತ್ತಿದ್ದೇನೆ. ಜೈಲಿನಲ್ಲಿ ನನಗೆ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ. ಹೀಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಈ ನಡುವೆ ರಾಗಿಣಿ ಹಾಗೂ ಸಂಜನಾ ಇಬ್ಬರೂ ಜೈಲಿನಲ್ಲಿ ಜಗಳವಾಡಿ ಪರಸ್ಪರ ಕಿತ್ತಾಡುತ್ತಿದ್ದ ಹಿನ್ನೆಲೆಯಲ್ಲಿ ಇಬ್ಬರನ್ನೂ ಪ್ರತ್ಯೇಕ ಸೆಲ್ ಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.