ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಕೊರೊನಾ ಪಾಸಿಟಿವ್ ಆಗಿದ್ದಾರೆ. ಈ ಬಗ್ಗೆ ಜೈರಾಮ್ ಠಾಕೂರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಕೊರೊನಾ ಪಾಸಿಟಿವ್ ಮಿತ್ರರ ಸಂಪರ್ಕಕ್ಕೆ ಬಂದಿದ್ದ ಸಿಎಂ ಪರೀಕ್ಷೆ ಮಾಡಿಸಿಕೊಂಡಿದ್ದರು. ಪರೀಕ್ಷಾ ವರದಿ ಪಾಸಿಟಿವ್ ಬರ್ತಿದ್ದಂತೆ ಅವರು ಕ್ವಾರಂಟೈನ್ ಆಗಿದ್ದಾರೆ.
ಒಂದು ವಾರದ ಹಿಂದೆ ಹಿಮಾಚಲ ಪ್ರದೇಶದ ಕ್ಯಾಬಿನೆಟ್ ಸಚಿವ ಮತ್ತು ನಗರಾಭಿವೃದ್ಧಿ ಸಚಿವ ಸುರೇಶ್ ಭಾರದ್ವಾಜ್, ಅವರ ಪತ್ನಿ ಮತ್ತು ಮಗಳಿಗೆ ಕೊರೊನಾ ಕಾಣಿಸಿಕೊಂಡಿತ್ತು. ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಸುರೇಶ್ ಭಾರದ್ವಾಜ್ ಪತ್ನಿಯನ್ನು ಶಿಮ್ಲಾದ ಐಜಿಎಂಸಿ ಆಸ್ಪತ್ರೆಗೆ ದಾಖಲಾಗಿತ್ತು. ಪರೀಕ್ಷೆ ವೇಳೆ ಕೊರೊನಾ ಇರುವುದು ಗೊತ್ತಾಗಿತ್ತು. ನಂತ್ರ ಕುಟುಂಬ ಸದಸ್ಯರ ಕೊರೊನಾ ಪರೀಕ್ಷೆ ನಡೆದಿತ್ತು. ನಗರಾಭಿವೃದ್ಧಿ ಸಚಿವರಿಗೂ ಕೊರೊನಾ ಇರುವುದು ದೃಢಪಟ್ಟಿತ್ತು.
ಅಕ್ಟೋಬರ್ 2ರಂದು ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಸುರೇಶ್ ಭಾರದ್ವಾಜ್ ಪಾಲ್ಗೊಂಡಿದ್ದರು. ಸಿಎಂ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆ ನಂತ್ರ ಭಾರದ್ವಾಜ್ ಮನೆಯಲ್ಲಿ ಕ್ವಾರಂಟೈನ್ ಆಗಿದ್ದರು. ಹಿಮಾಚಲದ ಮೂವರು ಸಚಿವರಿಗೆ ಈವರೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.