alex Certify ಫಲಿಸಿದ ಸಂಧಾನ: ಕೊಟ್ಟ ಖಾತೆಯನ್ನು ಒಪ್ಪಿಕೊಂಡ ಶ್ರೀರಾಮುಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫಲಿಸಿದ ಸಂಧಾನ: ಕೊಟ್ಟ ಖಾತೆಯನ್ನು ಒಪ್ಪಿಕೊಂಡ ಶ್ರೀರಾಮುಲು

ಬೆಂಗಳೂರು: ಖಾತೆ ಬದಲಾವಣೆಯಲ್ಲಿ ನನಗೆ ಯಾವುದೇ ರೀತಿಯ ಅಸಮಾಧಾನವಿಲ್ಲ. ನನಗೆ ನೀಡಿರುವ ಸಮಾಜ ಕಲ್ಯಾಣ ಇಲಾಖೆ ಖಾತೆಯನ್ನು ಸಂತೋಷದಿಂದ ಒಪ್ಪಿಕೊಂಡು ನಿರ್ವಹಿಸುತ್ತೇನೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಭೇಟಿ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಒಳ್ಳೆಯ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ. ಸುಧಾಕರ್ ಅವರು ವ್ಯದ್ಯರಾಗಿರುವುದರಿಂದ ಅವರಿಗೆ ವೈದ್ಯಕೀಯ ಶಿಕ್ಷಣ ಖಾತೆ ಜೊತೆಗೆ ಆರೋಗ್ಯ ಖಾತೆಯನ್ನು ಹೆಚ್ಚುವರಿಯಾಗಿ ನೀಡಿದ್ದಾರೆ. ಇದರಿಂದ ಕೊರೊನಾದಂತಹ ಕಠಿಣ ಸಂದರ್ಭವನ್ನು ನಿಭಾಯಿಸಲು ಸುಲಭವಾಗುತ್ತದೆ ಎಂದು ಹೇಳಿದರು.

ಇನ್ನು ಖಾತೆ ಬದಲಾವಣೆ ವಿಚಾರದಲ್ಲಿ ನನಗೆ ಅಸಮಾಧಾನವಾಗಿದೆ ಎಂದು ನಿನ್ನೆಯಿಂದ ಮಾಧ್ಯಮಗಳಲ್ಲಿ ತೋರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾದದ್ದು, ನನಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...