ಬೆಂಗಳೂರು: ಬೆತ್ತಲೆ ಫೋಟೋ ತೆಗೆದು ಯುವತಿಯರನ್ನು ಪೀಡಿಸುತ್ತಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾಡುಗೋಡಿ ನಿವಾಸಿ ಜಗದೀಶ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಯುವತಿಯರಿಗೆ ಅಪ್ರಾಪ್ತೆಯರಿಗೆ ಈತ ವಂಚಿಸುತ್ತಿದ್ದ. ಬೆತ್ತಲೆ ಫೋಟೋ ಕಳಿಸುವಂತೆ ಬೇಡಿಕೆ ಇಡುತ್ತಿದ್ದ. ಕಳುಹಿಸದಿದ್ದರೆ ಹುಡುಗಿಯರ ಹೆಸರಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ ಪೋಸ್ಟ್ ಮಾಡಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಈತನ ಕಾಟದಿಂದ ನೊಂದ ಅಪ್ರಾಪ್ತೆ ಪೋಷಕರಿಗೆ ಮಾಹಿತಿ ನೀಡಿದ್ದು, ಪೋಷಕರು ವೈಟ್ ಫೀಲ್ಡ್ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.