ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದೆ. ಕಲ್ಬುರ್ಗಿ ಜಿಲ್ಲೆಯಲ್ಲಿ ಗುರುವಾರ, ಶುಕ್ರವಾರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಹಾಮಳೆಗೆ ಜನ ತತ್ತರಿಸಿಹೋಗಿದ್ದು ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉಡುಪಿ, ಉತ್ತರಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬಿಜಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ.
ಮಲೆನಾಡು ಭಾಗದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಹಾಗೂ ಗದಗ, ಧಾರವಾಡ ಮೊದಲಾದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಯಾದಗಿರಿ, ಬೀದರ್, ಹಾವೇರಿ, ಕೊಪ್ಪಳ, ರಾಯಚೂರು, ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಗಂಟೆಗೆ ಸುಮಾರು 55 ಕಿಮೀ ಗಾಳಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.