
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಸೆಪ್ಟೆಂಬರ್ 28 ರಂದು NDPS ವಿಶೇಷ ಕೋರ್ಟ್ ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಡ್ರಗ್ಸ್ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ. ನಾನು ಡ್ರಗ್ಸ್ ಸೇವನೆ ಮಾಡಿಲ್ಲ. ಪೂರೈಕೆ ಅಥವಾ ಮಾರಾಟವನ್ನು ಮಾಡಿಲ್ಲ. ಪೊಲೀಸರು ಮಾಡಿರುವ ಆರೋಪಗಳಿಗೆ ದಾಖಲೆ ಇಲ್ಲ ಎಂದು ಅವರು ಹೇಳಿದ್ದಾರೆ.
ನಮ್ಮ ಮನೆಯಲ್ಲಿ ತಪಾಸಣೆ ವೇಳೆ ಮಾದಕ ಪದಾರ್ಥಗಳು ದೊರೆತಿಲ್ಲ. ಹೀಗಿದ್ದರೂ ಪೊಲೀಸರು ಬಂಧಿಸಿರುವುದು ಕಾನೂನುಬಾಹಿರವಾಗಿದೆ ಎಂದು ರಾಗಿಣಿ ದೂರಿದ್ದು ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆನ್ನಲಾಗಿದೆ.