alex Certify ಉಪಮುಖ್ಯಮಂತ್ರಿ ಪುತ್ರನ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪಮುಖ್ಯಮಂತ್ರಿ ಪುತ್ರನ ಸ್ಥಿತಿ ಗಂಭೀರ

ಬೆಂಗಳೂರು: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪುತ್ರ ಡಾ.ಗೋಪಾಲ ಕಾರಜೋಳ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಡಿಸಿಎಂ ಕಾರಜೋಳ ಅವರಿಗೂ ಕೊರೊನಾ ಸೋಂಕು ತಗುಲಿತ್ತು. ಇತ್ತೀಚೆಗಷ್ಟೇ ಅವರು ಗುಣಮುಖರಾಗುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ತಮ್ಮ ಇಡೀ ಕುಟುಂಬ ಕೊರೊನಾ ಸೋಂಕಿನಿಂದ ಬಳಲುತ್ತಿದೆ ಎಂದು ತಿಳಿಸಿದ್ದರು.

ಇದೀಗ ಕಾರಜೋಳ ಅವರ ಪುತ್ರ ಗೋಪಾಲ ಕಾರಜೋಳ ಅವರು ಕೊರೊನಾ ಸೋಂಕಿನಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದಾರೆ. ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ನೀಡದರೂ ಗುಣಮುಖರಾಗಿಲ್ಲ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಗೋಪಾಲ ಕಾರಜೋಳ ಅವರನ್ನು ಚೆನ್ನೈ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...