ನವದೆಹಲಿ: ಸಾಲ ಖಾತರಿ ಯೋಜನೆ ಮುಂದುವರಿಕೆ ಅನುಮಾನ ಎಂದು ಹೇಳಲಾಗಿದೆ. ಕೇಂದ್ರ ಸರ್ಕಾರ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಮೊತ್ತದ ತುರ್ತು ಸಾಲ ಖಾತರಿ ಯೋಜನೆ ಘೋಷಿಸಿದೆ.
ಅಕ್ಟೋಬರ್ ನಂತರ ಯೋಜನೆ ಮುಂದುವರಿಕೆ ಆಗುವುದು ಅನುಮಾನ ಎಂದು ಹೇಳಲಾಗಿದೆ. ಎಂಎಸ್ಎಂಇಗಳಿಗೆ ಮೂರು ಲಕ್ಷ ಕೋಟಿ ರೂಪಾಯಿ ಮೊತ್ತದ ತುರ್ತು ಸಾಲ ಖಾತರಿ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.
ಯೋಜನೆಯ ಗುರಿ ಶೇಕಡ 65ರಷ್ಟು ಮೊತ್ತವನ್ನು ಮಾತ್ರ ಮಂಜೂರು ಮಾಡಲಾಗಿದೆ. ಕೊರೋನಾ ಲಾಕ್ಡೌನ್ ಸಂಕಷ್ಟದಿಂದ ತತ್ತರಿಸಿದ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ ಹಣಕಾಸು ನೆರವು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಯೋಜನೆ ಜಾರಿಗೊಳಿಸಿದೆ. ಯೋಜನೆಯ ಲಾಭವನ್ನು ಪಡೆಯಲು ಯಾರೂ ಇಲ್ಲದಿದ್ದರೆ ಯೋಜನೆಯನ್ನು ಮುಂದುವರಿಸುವ ಅಗತ್ಯತೆ ಇಲ್ಲವೆಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.