alex Certify ಕಾಲುವೆ ಸ್ವಚ್ಛಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲುವೆ ಸ್ವಚ್ಛಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪೊಲೀಸರು

ಬೆಂಗಳೂರು: ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಂಗಳೂರಿಗರು ತತ್ತರಿಸಿದ್ದಾರೆ. ಹಲವೆಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ರಸ್ತೆಗಳೆಲ್ಲ ಜಲಾವೃತಗೊಂಡಿವೆ. ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದರೂ ಬಿಬಿಎಂಪಿಯವರು ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಪೊಲೀಸರೇ ಕಾಲುವೆ ಸ್ವಚ್ಚಗೊಳಿಸುತ್ತಿರುವ ಪ್ರಸಂಗವೂ ನಡೆದಿದೆ.

ಬೆಂಗಳೂರಿನ ಮಲ್ಲತ್ತಹಳ್ಳಿ ಪ್ರದೇಶ ಸಂಪೂರ್ಣ ಕೆರೆಯಂತಾಗಿದ್ದು, ಬಹುತೇಕ ಮನೆಗಳು ಜಲಾವೃತಗೊಂಡಿವೆ. ಮೈಸೂರು ರಸ್ತೆ ಬಳಿಯ ರಾಜಕಾಲುವೆ ನದಿಗಳಂತೆ ತುಂಬಿಹರಿಯುತ್ತಿವೆ. ಮಳೆಯಿಂದಾಗಿ ರಾಜಕಾಲುವೆ ತಡೆಗೋಡೆ ನಿರ್ಮಾಣಕ್ಕೆ ಅಡ್ಡಿಯುಂಟಾಗಿದೆ.

ಇನ್ನು ಆರ್.ಆರ್ ನಗರದ ಆರ್ಚ್ ಬಳಿ ಚರಂಡಿ ನೀರು ರಸ್ತೆಗಳಿಗೆ ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಪೊಲೀಸರೇ ಚರಂಡಿ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಚರಂಡಿ ನೀರಿನ ಅವ್ಯಸ್ಥೆಯಿಂದಾಗಿ ಟ್ರಾಫಿಕ್ ಜಾಮ್ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...