ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಎಷ್ಟೇ ಬಾರಿ ಆದೇಶ ಹೊರಡಿಸಿದರೂ ಪದೇ ಪದೇ ನಿಮಗಳನ್ನು ಗಾಳಿಗೆ ತೂರಿ ವಾಹನ ಸವಾರರು ಬೇಜವಾಬ್ದಾರಿ ಮೆರೆಯುತ್ತಿದ್ದರು. ಈ ನಿಟ್ಟಿನಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿರುವ ಸಾರಿಗೆ ಇಲಾಖೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ಲೈಸೆನ್ಸ್ ರದ್ದು ಮಾಡಲು ಆದೇಶ ಹೊರಡಿಸಿದೆ.
ಹೌದು. ಇನ್ನುಮುಂದೆ ಬೈಕ್ ಸವಾರ ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲೇಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳ ಕಾಲ ವಾಹನ ಪರವಾನಿಗಿ ಅಮಾನತುಗೊಳಿಸಬೇಕು ಎಂದು ಸಾರಿಗೆ ಇಲಾಖೆ ಆಯುಕ್ತರ ಕಚೇರಿ ಆದೇಶ ಹೊರಡಿಸಿದೆ.
ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ.