ಸರ್ಜಾ ಕುಟುಂಬದಲ್ಲಿ ಹೊಸ ಸದಸ್ಯರೊಬ್ಬರ ಆಗಮನಕ್ಕೆ ಕ್ಷಣಗಣನೆ ಶುರುವಾಗಿದೆ. ಇತ್ತೀಚೆಗಷ್ಟೇ ನಿಧನರಾಗಿದ್ದ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ರಾಜ್ ತುಂಬು ಗರ್ಭಿಣಿಯಾಗಿದ್ದು ಮನೆಯಲ್ಲಿ ಸಂತಸ ಮನೆ ಮಾಡಿದೆ.
ಮೇಘನಾ ರಾಜ್ ಅವರ ಸೀಮಂತ ಕಾರ್ಯ ಮುಗಿಸಿದ ಕುಟುಂಬದವರು ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮನೆಗೆ ಹೊಸ ಸದಸ್ಯರೊಬ್ಬರ ಆಗಮನದ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಇದೇ ವೇಳೆ ಚಿರು ಸಹೋದರ ಧ್ರುವ ಸರ್ಜಾ ಅಣ್ಣನ ಮಗುವಿಗೆ 10 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿಯ ತೊಟ್ಟಿಲು ಖರೀದಿಸಿದ್ದಾರೆ.