ಬಿ.ಎಸ್. ಯಡಿಯೂರಪ್ಪ ಹೆಚ್ಚು ದಿನ ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ಹೇಳಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತೆ ಗುಡುಗಿದ್ದಾರೆ.
ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗುತ್ತಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಹೆಚ್ಚು ದಿನ ಇರಲ್ಲವೆಂದು ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಕ್ಕೆ ಬಿಜೆಪಿ ಪಾಳಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.
ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ. ಯತ್ನಾಳ್ ಹಗಲುಗನಸು ಕಾಣುತ್ತಿದ್ದಾರೆ ಎಂದೆಲ್ಲ ಹೇಳಲಾಗಿತ್ತು. ಇದಾದ ಬಳಿಕ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಬಸವನಗೌಡ ಪಾಟೀಲ್ ಯತ್ನಾಳ್, ಕರ್ನಾಟಕದ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ, ಆತ್ಮಸಾಕ್ಷಿಯಾಗಿ, ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ ಹೊರತು ಸಚಿವನಾಗಲು ಯಾರದೋ ಕಾಲು ಹಿಡಿಯುವ ತಲೆ ಹಿಡಿಯುವ ಕೆಲಸ ಮಾಡಿಲ್ಲ. ಅದು ನನ್ನ ಜಾಯಮಾನವಲ್ಲ ಎಂದು ಗುಡುಗಿದ್ದಾರೆ.