ಬೆಂಗಳೂರು: ರಾಜ್ಯದ ಒಳನಾಡು ಜಿಲ್ಲೆಗಳು ಮತ್ತು ಕರಾವಳಿ ಪ್ರದೇಶದಲ್ಲಿ ಅಕ್ಟೋಬರ್ 22, 23ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ರಾಮನಗರ, ಕೋಲಾರ, ತುಮಕೂರು, ದಾವಣಗೆರೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ಬಳ್ಳಾರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬಾಗಲಕೋಟೆ, ಬೆಳಗಾವಿ, ಹಾವೇರಿ ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ವ್ಯಾಪ್ತಿಯಲ್ಲಿ ಅಕ್ಟೋಬರ್ 24 ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.