ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾಣಿ ಜಾಮೀನು ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿ ಹೈಕೋರ್ಟ್ ಆದೇಶ ನಿಡಿದೆ.
ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ಸಂಜನಾ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ನ್ಯಾಯಮೂರ್ತಿ ಹರೀಶ್ ಕುಮಾರ್ ಅವರಿದ್ದ ಪೀಠ ಅರ್ಜಿ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಸಂಜನಾ ಪರ ವಾದ ಮಂಡಿಸಿದ ವಕೀಲ ಹಷಮತ್, ಸಿಸಿಬಿ ದಾಳಿ ವೇಳೆ ಸಂಜನಾ ಬಳಿ ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ. ಸಂಜನಾ ಕ್ರಿಮಿನಲ್ ಹಿನ್ನಲೆಯುಳ್ಳವರಲ್ಲ. ಇಂತದ್ದೇ ಕೇಸ್ ನಲ್ಲಿ ಮುಂಬೈ ಹೈಕೋರ್ಟ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ನೀಡಿದೆ ಎಂದು ಉದಾಹರಣೆ ಸಮೇತ ವಾದ ಮಂಡಿಸಿದ್ದಾರೆ ಎಂದು ತಿಳಿದುಬಂದಿದೆ.
ವಾದ ಆಲಿಸಿದ ಹೈಕೋರ್ಟ್ ಅ.24ಕ್ಕೆ ವಿಚಾರಣೆ ಅರ್ಜಿ ಮುಂದೂಡಿದೆ