ನವದೆಹಲಿ: ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ಕೊರೋನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಮುಕ್ತಾಯವಾಗಿದೆ.
ಎರಡನೇ ಹಂತದ ಪ್ರಯೋಗದಲ್ಲಿ ಲಸಿಕೆ ಸುರಕ್ಷಿತವಾಗಿದೆ ಎನ್ನುವುದು ಗೊತ್ತಾಗಿದೆ. ನವೆಂಬರ್ ನಲ್ಲಿ ಮೂರನೇ ಹಂತದ ಲಸಿಕೆಯ ಪ್ರಯೋಗ ಆರಂಭವಾಗಲಿದ್ದು ಇದಕ್ಕೆ ತಜ್ಞರ ಸಮಿತಿ ಒಪ್ಪಿಗೆ ನೀಡಿದೆ. ಮೂರನೇ ಹಂತದಲ್ಲಿ 25,800 ಜನರ ಮೇಲೆ ಲಸಿಕೆ ಪ್ರಯೋಗಿಸಲಾಗುವುದು.
28 ದಿನಗಳ ನಂತರ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗುತ್ತದೆ. ಮೂರನೇ ಹಂತದ ಪ್ರಯೋಗ ಯಶಸ್ವಿಯಾದಲ್ಲಿ ಲಸಿಕೆ ಫೆಬ್ರವರಿ ತಿಂಗಳಲ್ಲಿ ಮಾರುಕಟ್ಟೆಗೆ ಬರಲಿದೆ. ಮೂರನೇ ಹಂತದ ಪ್ರಯೋಗಕ್ಕೆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕಂಪನಿಯಿಂದ ಪತ್ರ ಬರೆಯಲಾಗಿದೆ ಎಂದು ಹೇಳಲಾಗಿದೆ.