ಲಖ್ನೋ: ಉತ್ತರ ಪ್ರದೇಶದಲ್ಲಿ 3.4 ಲಕ್ಷ ರೈತರ ರೈತರ ಖಾತೆಗೆ 113 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 19 ಜಿಲ್ಲೆಗಳಲ್ಲಿ ನೆರೆ ಸಂತ್ರಸ್ತರಾಗಿರುವ 3,48,511 ರೈತರ ಖಾತೆಗಳಿಗೆ 113.21 ಕೋಟಿ ರೂಪಾಯಿ ವರ್ಗಾವಣೆ ಮಾಡಿದ್ದಾರೆ.
ಆನ್ಲೈನ್ ಮೂಲಕ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯಿಂದ ಮಾಹಿತಿ ನೀಡಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರೈತರನ್ನು ಉದ್ದೇಶಿಸಿ ಮಾತನಾಡಿರುವ ಯೋಗಿ ಆದಿತ್ಯನಾಥ್, ರೈತರ ಪರಿಶ್ರಮ ಮತ್ತು ಹಾನಿಯ ಪ್ರಮಾಣಕ್ಕೆ ಹೋಲಿಸಿದರೆ ಪರಿಹಾರದ ಹಣ ಕಡಿಮೆಯಾಗಿದೆ. ಆದರೆ, ರೈತರ ಬಗ್ಗೆ ಸರ್ಕಾರಕ್ಕೆ ಇರುವ ಬದ್ಧತೆಯನ್ನು ಇದು ತೋರಿಸುತ್ತದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ರೈತರ ಆದಾಯವನ್ನು ದ್ವಿಗುಣಗೊಳಿಸಲು ಕ್ರಮಕೈಗೊಂಡಿದೆ. ರೈತರ ಕಲ್ಯಾಣಕ್ಕಾಗಿ ಕಿಸಾನ್ ಸಮ್ಮಾನ್, ಬೆಳೆ ವಿಮೆ ಸೇರಿ ಹಲವು ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ.