ಗ್ಯಾಸ್ಟ್ರಿಕ್ ಸಮಸ್ಯೆ ಕಾಡದವರು ಯಾರೂ ಇಲ್ಲವೇನೋ, ಹೊಟ್ಟೆ ತುಂಬಾ ತಿಂದ ಬಳಿಕ, ಅಧಿಕ ಮಸಾಲೆ ಪದಾರ್ಥಗಳನ್ನು ಸೇವಿಸಿದ ಬಳಿಕ ಹೊಟ್ಟೆಯುಬ್ಬರ ಸಮಸ್ಯೆ ಕಾಡಿಯೇ ಕಾಡುತ್ತದೆ. ಇದರ ಪರಿಹಾರಕ್ಕೆ ಕೆಲವು ಮನೆಮದ್ದುಗಳಿವೆ.
ತಂಪಾದ ಹಾಲು ಕುಡಿಯಿರಿ. ಬೆಳಿಗ್ಗೆ ಎದ್ದಾಕ್ಷಣ ಸಕ್ಕರೆ ಬೆರೆಸದ ತಂಪಾದ ಹಾಲು ಕುಡಿಯುವುದರಿಂದ ಅದು ದೇಹದ ಹೆಚ್ಚಿನ ಆಮ್ಲೀಯ ಅಂಶಗಳನ್ನು ಹೀರಿಕೊಳ್ಳುತ್ತದೆ. ತಂಪಾದ ಹಾಲು ವಿಪರೀತ ಗ್ಯಾಸ್ಟ್ರಿಕ್ ಮತ್ತು ಎದೆಯುರಿಯನ್ನು ಕಡಿಮೆ ಮಾಡುತ್ತದೆ.
ತುಳಸಿ ಎಲೆಗಳನ್ನು ಜಗಿಯುವುದರಿಂದ ಅಥವಾ ನೀವು ಕುಡಿಯುವ ನೀರಿಗೆ ತುಳಸಿ ಎಲೆಗಳನ್ನು ಹಾಕಿಟ್ಟು ಸೇವಿಸುವುದರಿಂದಲೂ ಗ್ಯಾಸ್ಟ್ರಿಕ್ ಸಮಸ್ಯೆ ದೂರವಾಗುತ್ತದೆ.
ಮಜ್ಜಿಗೆಗೆ ಚಿಟಿಕೆ ಉಪ್ಪು ಹಾಗೂ ಇಂಗು ಸೇರಿಸಿ ಕುಡಿಯುವುದರಿಂದ ಗ್ಯಾಸ್ಟ್ರಿಕ್ ನಿಂದ ಉಂಟಾಗುವ ಹೊಟ್ಟೆ ನೋವು ಕಡಿಮೆಯಾಗುತ್ತದೆ. ಜೀರ್ಣಕ್ರಿಯೆಯೂ ಸುಧಾರಿಸುತ್ತದೆ.
ಸೋಂಪು ಕಾಳುಗಳನ್ನು ಬಾಯಿಯಲ್ಲಿ ಹಾಕಿಕೊಂಡು ಜಗಿಯಿರಿ. ಇದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ದೂರವಾಗುತ್ತದೆ. ಜೀರಿಗೆ ಕೊತ್ತಂಬರಿ ಕಷಾಯ ತಯಾರಿಸಿಯೂ ಕುಡಿಯಬಹುದು.