ಸೌತೆಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಬಳಸಿಕೊಂಡು ಆರೋಗ್ಯಕರವಾದ, ಹಾಗೇ ರುಚಿಕರವಾದ ಇಡ್ಲಿಯನ್ನು ಮಾಡಬಹುದು. ಮಾಡುವ ವಿಧಾನ ಇಲ್ಲಿದೆ ನೋಡಿ.
ಬೇಕಾಗುವ ಸಾಮಗ್ರಿಗಳು:
1ಕಪ್ – ಇಡ್ಲಿ ಅಕ್ಕಿ, 1 ಕಪ್ – ಸೌತೆಕಾಯಿ ತುರಿ, ½ ಕಪ್ – ತೆಂಗಿನಕಾಯಿ ತುರಿ, ½ ಕಪ್ – ನೀರು, ಉಪ್ಪು – ರುಚಿಗೆ ತಕ್ಕಷ್ಟು.
ಮಾಡುವ ವಿಧಾನ:
ಅಕ್ಕಿಯನ್ನು ತೊಳೆದು 30 ನಿಮಿಷಗಳ ಕಾಲ ನೆನೆಸಿಡಿ. ನಂತರ ಇದರ ನೀರನ್ನು ಬಸಿದುಕೊಂಡು ತೆಂಗಿನಕಾಯಿ ತುರಿಯೊಂದಿಗೆ ರುಬ್ಬಿಕೊಳ್ಳಿ. ಸ್ವಲ್ಪ ನೀರು ಸೇರಿಸಿ ತರಿ ತರಿಯಾಗಿ ರುಬ್ಬಿದರೆ ಸಾಕು.
ನಂತರ ಇದಕ್ಕೆ ತುರಿದ ಸೌತೆಕಾಯಿ ಹಾಗೂ ಉಪ್ಪು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಇಡ್ಲಿ ತಟ್ಟೆಗೆ ಸ್ವಲ್ಪ ಎಣ್ಣೆ ಸವರಿ ಸ್ವಲ್ಪ ಸ್ವಲ್ಪ ಹಿಟ್ಟನ್ನು ಹಾಕಿ ಹಬೆಯಲ್ಲಿ 20 ನಿಮಿಷಗಳ ಕಾಲ ಬೇಯಿಸಿಕೊಳ್ಳಿ. ತೆಂಗಿನಕಾಯಿ ಚಟ್ನಿಯೊಂದಿಗೆ ಸವಿಯಲು ಚೆನ್ನಾಗಿರುತ್ತದೆ.