ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ಶಾಲಾ ಆವರಣದಲ್ಲಿ ನೀರಿನ ಗುಂಡಿಗೆ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಬ್ಯಾಡಗಿಯ ಸರ್ಕಾರಿ ಉರ್ದು ಶಾಲೆ ಆವರಣದಲ್ಲಿ ಕೊಠಡಿ ನಿರ್ಮಾಣಕ್ಕೆ ತೆಗೆಯಲಾಗಿದ್ದ ಗುಂಡಿಯಲ್ಲಿ ನೀರು ತುಂಬಿಕೊಂಡಿದೆ. ಅಲ್ಲಿಗೆ ಆಟವಾಡಲು ತೆರಳಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
7 -8 ಮಕ್ಕಳು ಶಾಲಾ ಮೈದಾನದಲ್ಲಿ ಆಟವಾಡುವಾಗ ಮೂವರು ಆಕಸ್ಮಿಕವಾಗಿ ನೀರಿನ ಗುಂಡಿನ ಬಿದ್ದಿದ್ದಾರೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಮತ್ತು ತುರ್ತುಸೇವೆ ಸಿಬ್ಬಂದಿ, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.