alex Certify ಫೈವ್ ಸ್ಟಾರ್ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ: ನಟ ಅರೆಸ್ಟ್, ಮೂವರು ನಟಿಯರ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೈವ್ ಸ್ಟಾರ್ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ: ನಟ ಅರೆಸ್ಟ್, ಮೂವರು ನಟಿಯರ ರಕ್ಷಣೆ

ಮುಂಬೈ: ಮುಂಬೈ ಅಪರಾಧ ವಿಭಾಗದ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ನಟನನ್ನು ಬಂಧಿಸಿದ್ದಾರೆ.

ಸಣ್ಣ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ಚಲನಚಿತ್ರ ನಟನನ್ನು ಬಂಧಿಸಲಾಗಿದ್ದು, ಟೆಲಿವಿಷನ್ ಧಾರಾವಾಹಿಗಳಲ್ಲಿ ಅಭಿನಯಿಸಿರುವ ಮೂವರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಶನಿವಾರ ತಿಳಿಸಿದ್ದಾರೆ.

ದಂಧೆಯಲ್ಲಿ ಚಲನಚಿತ್ರ, ಧಾರವಾಹಿಗಳಲ್ಲಿ ಅಭಿನಯಿಸುವ ನಟರು, ನಟಿಯರು ಇರುವ ಬಗ್ಗೆ ಮಾಹಿತಿ ಕಲೆಹಾಕಿದ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಗ್ರಾಹಕರ ಸೋಗಿನಲ್ಲಿ ವ್ಯಕ್ತಿಯನ್ನು ಕಳುಹಿಸಿ ನಂತರ ದಾಳಿ ಮಾಡಿದ್ದಾರೆ.

ಹಿರಿಯ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ತಾವಡೆ ಅವರ ನೇತೃತ್ವದ ತಂಡ ಶುಕ್ರವಾರ ಮಧ್ಯಾಹ್ನ ಗೋರೆಗಾಂವ್ ನ ಪಂಚತಾರ ಹೋಟೆಲ್ ಮೇಲೆ ದಾಳಿ ನಡೆಸಿದೆ. ಅನೈತಿಕ ಕಳ್ಳ ಸಾಗಣೆ ತಡೆ, ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ವನ್ರಾಯ್ ಠಾಣೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...