alex Certify ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಸರಳವಾಗಿ ಪೂಜೆ ನೆರವೇರಿಸಿದ ಯದುವೀರ್ ಒಡೆಯರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಸರಳವಾಗಿ ಪೂಜೆ ನೆರವೇರಿಸಿದ ಯದುವೀರ್ ಒಡೆಯರ್

Celebrations of Dasara in Mysore palace cancelled following death in Royal  family | Tourism News Live

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಮೈಸೂರು ದಸರಾ ಕಾರ್ಯಕ್ರಮಗಳು ನಡೆಯುತ್ತಿದ್ದು, ಇಂದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಯುಧ ಪೂಜೆ ನೆರವೇರಿಸಿದರು.

ಆಯುಧ ಪೂಜೆ ಹಿನ್ನೆಲೆಯಲ್ಲಿ ಮೈಸೂರು ಅರಮನೆಯಲ್ಲಿ ಬೆಳಗಿನಿಂದಲೇ ಪೂಜಾ ವಿಧಿವಿಧಾನಗಳು ನಡೆಯುತ್ತಿದ್ದು, ಅರಮನೆಯ ಕಲ್ಯಾಣ ಮಂಟಪದಲ್ಲಿ ಯದುವೀರ್ ಒಡೆಯರ್ ಸಾಂಪ್ರದಾಯಿಕವಾಗಿ ಆಯುಧಗಳಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿದರು. ಇದೇ ವೇಳೆ ಅರಮನೆ ಆನೆ ಬಾಗಿಲು ದ್ವಾರದಲ್ಲಿ ಪೊಲೀಸ್ ಸಿಬ್ಬಂದಿಗಳು ಫಿರಂಗಿ ಗಾಡಿಗಳಿಗೆ ಪೂಜೆ ನೆರವೇರಿಸಿದರು.

ಬಳಿಕ ಅರಮನೆಯ ಸವಾರಿ ತೊಟ್ಟಿಯಲ್ಲಿ ಪಟ್ಟದ ಆನೆ, ಕುದುರೆ, ಒಂಟೆಗಳಿಗೆ ಹಾಗೂ ಅರಮನೆಯ ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು. ನವರಾತ್ರಿ ಹಿನ್ನೆಲೆಯಲ್ಲಿ ಸಂಜೆ ಎಂದಿನಂತೆ ಯದುವೀರ್ ಒಡೆಯರ್ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...