ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಜೋರಾಗಿದ್ದು ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಪ್ರಚಾರ ನಡೆಸಿದ್ದಾರೆ.
ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಹಣಕ್ಕಾಗಿ ಮಾರಾಟವಾಗಿಲ್ಲ. ಕಾಂಗ್ರೆಸ್ ಪಕ್ಷದವರು ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ನೀವು ನನಗೆ ಮತ ಹಾಕಿ ಶಾಸಕನನ್ನಾಗಿ ಆಯ್ಕೆ ಮಾಡಿದ್ದೀರಿ. ಅದಾದ ನಂತರ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾಗಿತ್ತು. ಮೈತ್ರಿ ಸರ್ಕಾರದಲ್ಲಿ ನಮ್ಮ ಯಾವುದೇ ಕೆಲಸ ಆಗುತ್ತಿರಲಿಲ್ಲ. ಕಾಂಗ್ರೆಸ್ ನಾಯಕರು ಜೆಡಿಎಸ್ ನಾಯಕರಿಗೆ ಹೇಳಿ ಎನ್ನುತ್ತಿದ್ದರು. ಜೆಡಿಎಸ್ ನಾಯಕರಿಗೆ ಹೇಳಿದರೂ ನಮ್ಮ ಕೆಲಸ ಆಗುತ್ತಿರಲಿಲ್ಲ. ಮೈತ್ರಿ ಸರ್ಕಾರದಲ್ಲಿ ನಮ್ಮನ್ನು ಬರಿ ಓಡಾಡಿಸುತ್ತಿದ್ದರು. ನನ್ನ ಕ್ಷೇತ್ರದ ಕೆಲಸ ಆಗುತ್ತಿರಲಿಲ್ಲ ಹೀಗಾಗಿ ಮೈತ್ರಿ ಸರ್ಕಾರವನ್ನು ನಾನು ಬಿಟ್ಟು ಬಂದೆ ಎಂದು ಮುನಿರತ್ನ ಹೇಳಿದ್ದಾರೆ.