ನವದೆಹಲಿ: ಲಾಕ್ಡೌನ್ ನಿಂದ ಕಂಗೆಟ್ಟಿರುವ ಉದ್ದಿಮೆಗಳಿಗೆ ಆರ್ಥಿಕ ಉತ್ತೇಜನ ನೀಡುವ ಉದ್ದೇಶದಿಂದ ದೀಪಾವಳಿ ವೇಳೆಗೆ ಕೇಂದ್ರದಿಂದ ನಾಲ್ಕನೇ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈಗಾಗಲೇ ದಸರಾ ಗಿಫ್ಟ್ ನೀಡಿರುವ ಕೇಂದ್ರ ಸರ್ಕಾರ ದೀಪಾವಳಿ ಉಡುಗೊರೆಯಾಗಿ ನಾಲ್ಕನೆಯ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಲು ಸಿದ್ಧತೆ ಮಾಡಿಕೊಂಡಿದೆ.
ಲಾಕ್ ಡೌನ್ ಜಾರಿಯಾದ ನಂತರ ಕಂಗೆಟ್ಟಿರುವ ಉದ್ದಿಮೆಗಳಿಗೆ ಆರ್ಥಿಕ ಉತ್ತೇಜನ ನೀಡಲಾಗುವುದು. ಒಂದರಿಂದ ನಾಲ್ಕನೇ ಹಂತದ ನಗರಗಳಲ್ಲಿ ಮೂಲಸೌಕರ್ಯ ಯೋಜನೆ ಕೈಗೆತ್ತಿಕೊಳ್ಳಲು ಪ್ರೋತ್ಸಾಹ ನೀಡಲಾಗುವುದು ಎಂದು ಹೇಳಲಾಗಿದೆ.