
ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಬುಕ್ಕಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 13.5 ಲಕ್ಷ ರೂಪಾಯಿ ನಗದು, ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ.
ಹೊಯ್ಸಳ ಗೌಡ ಮತ್ತು ನರಸಿಂಹಮೂರ್ತಿ ಬಂಧಿತ ಆರೋಪಿಗಳಾಗಿದ್ದಾರೆ. ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.