ಬೆಂಗಳೂರು: ಅಕ್ಟೋಬರ್ 28 ರಂದು ಪದವೀಧರರು, ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಎಲ್ಲಾ ವಿದ್ಯಾಸಂಸ್ಥೆಗಳ ಪದವೀಧರರು, ಶಿಕ್ಷಕರಿಗೆ, ಕೆಲಸ ನಿರ್ವಹಿಸುವ ಎಲ್ಲಾ ಪದವೀಧರರು, ಶಿಕ್ಷಕರಿಗೆ ಸಾಂದರ್ಭಿಕ ರಜೆ ನೀಡಲಾಗಿದೆ.
ಮತ ಚಲಾಯಿಸಲು ಅನುಕೂಲವಾಗುವಂತೆ ಪದವೀಧರರು ಮತ್ತು ಶಿಕ್ಷಕರಿಗೆ ನಾಳೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ಕೋಲಾರ, ದಾವಣಗೆರೆ, ಚಿಕ್ಕಬಳ್ಳಾಪುರ, ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ರಾಮನಗರ ಜಿಲ್ಲೆಗಳಲ್ಲಿ ವಿಧಾನಪರಿಷತ್ ಚುನಾವಣೆ ಕಾರಣ ರಜೆ ನೀಡಲಾಗಿದೆ.