ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ನಾನಾ ಹುದ್ದೆಗಳ ನೇಮಕಾತಿಗೆ ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಲಾಕ್ಡೌನ್ ಜಾರಿಯಾಗಿದ್ದ ಕಾರಣ ಪದವಿ ಅಂತಿಮ ವರ್ಷದ ಪರೀಕ್ಷೆಗಳು ವಿಳಂಬವಾಗಿವೆ. ಹೀಗಾಗಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಿಂದ ವಂಚಿತರಾಗಿದ್ದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶವನ್ನು ನೀಡಲು ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಮುಂದಾಗಿದೆ.
ಈ ಸಂಬಂಧ ತಿದ್ದುಪಡಿ ಅಧಿಸೂಚನೆ ಪ್ರಕಟಿಸಲಾಗಿದೆ. ಹಿಂದೆ ಹೊರಡಿಸಿದ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ ಮತ್ತೊಮ್ಮೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ನವೆಂಬರ್ ಒಳಗೆ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿರುವ ಕಚೇರಿ ಸಹಾಯಕರು, ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 9ರ ವರೆಗೆ ಅವಕಾಶವಿದೆ. ನವೆಂಬರ್ 11 ರ ವರೆಗೆ ಪ್ರೊಬೆಷನರಿ ಆಫೀಸರ್, ಮ್ಯಾನೇಜ್ಮೆಂಟ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. 3517 ಹುದ್ದೆಗಳ ನೇಮಕಾತಿ ನಡೆಯಲಿದ್ದು,. ಕ್ಲರಿಕಲ್ ಹುದ್ದೆಗಳಿಗೆ ನವೆಂಬರ್ 6 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ www.ibps.in ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.