ಬೆಂಗಳೂರು: ಶ್ರೀಮಂತ ವ್ಯಕ್ತಿಗಳನ್ನು ಟಾರ್ಗೆಟ್ ಮಾಡಿ ಹನಿಟ್ರ್ಯಾಪ್ ಮೂಲಕ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಂಜಲಿ, ಪ್ರೇಮನಾಥ್, ದೀಪಕ್, ಟೈಸನ್, ವಿನೋದ್, ಪ್ರಕಾಶ್, ಈಶ್ವರಿ ಎಂದು ಗುರುತಿಸಲಾಗಿದೆ. ಪೈ ಲೇಔಟ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಈ 7 ಜನರ ಗ್ಯಾಂಗ್ ಅಲ್ಲಿಗೆ ಶ್ರೀಮಂತ ವ್ಯಕ್ತಿಗಳನ್ನು ಕರೆಸುತ್ತಿದ್ದರು. ಯುವತಿಯ ಜೊತೆ ಶ್ರೀಮಂತ ವ್ಯಕ್ತಿಗಳಿರುವಾಗ ಯುವತಿಯ ಪತಿ ಹಾಗೂ ಸ್ನೇಹಿತರಂತೆ ಮನೆಗೆ ನುಗ್ಗಿ, ಮೊಬೈಲ್ ನಲ್ಲಿ ವಿಡಿಯೋ ಚಿತ್ರಿಸಿ ಬೆದರಿಕೆ ಹಾಕುತ್ತಿದ್ದರು. ವಿಷಯ ಹೊರಗೆ ಬಾಯ್ಬಿಟ್ಟರೆ ವಿಡಿಯೋ ರಿಲೀಸ್ ಮಾಡುವುದಾಗಿ ಹೇಳುತ್ತಿದ್ದರಲ್ಲದೇ ಪ್ರಾಣ ಬೆದರಿಕೆ ಹಾಕಿ ಹಣ, ಚಿನ್ನಾಭರಣ ದೋಚುತ್ತಿದ್ದರು.
ಹನಿಟ್ರ್ಯಾಪ್ ಗೆ ಒಳಗಾದ ವ್ಯಕ್ತಿ ಮಹದೇವಪುರ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ 7 ಆರೋಪಿಗಳನ್ನು ಬಂಧಿಸಿದ್ದಾರೆ.