ಕೊರೊನಾ ವೈರಸ್ ನಿಂದಾಗಿ ಶಾಲೆಗಳು ಬಂದ್ ಆಗಿವೆ. ಕೇಂದ್ರ ಸರ್ಕಾರ ಶಾಲೆ ತೆರೆಯುವ ಅಂತಿಮ ನಿರ್ಧಾರವನ್ನು ರಾಜ್ಯ ಸರ್ಕಾರಗಳ ಮೇಲೆ ಬಿಟ್ಟಿದೆ. ಕೊರೊನಾ ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ಶಾಲೆ ಆರಂಭದ ಬಗ್ಗೆ ದೆಹಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಸದ್ಯ ಶಾಲೆ ತೆರೆಯದಿರಲು ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ಎಲ್ಲ ಶಾಲೆಗಳು ಮುಚ್ಚಿರುತ್ತವೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಕೊರೊನಾ ಪ್ರಕರಣದ ಮಧ್ಯೆ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಕಷ್ಟ. ಇದಕ್ಕೆ ಪಾಲಕರು ಒಪ್ಪುವುದಿಲ್ಲ. ಶಾಲೆ ತೆರೆದ ಅನೇಕ ದೇಶಗಳಲ್ಲಿ ಭಯ ಜಾಸ್ತಿಯಾಗಿದೆ. ಸಿಎಂ ಕೇಜ್ರಿವಾಲ್ ಜೊತೆ ಈ ಬಗ್ಗೆ ಮಾತುಕತೆ ನಡೆಸಿ ತೀರ್ಮಾನ ಕೈಗೊಂಡಿದ್ದೇನೆಂದು ಸಿಸೋಡಿಯಾ ಹೇಳಿದ್ದಾರೆ.
ಇದಲ್ಲದೆ ದೆಹಲಿಯ ಇಂದ್ರಪ್ರಸ್ಥ ವಿಶ್ವವಿದ್ಯಾಲಯದ ಸೀಟ್ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. 1,330 ಸೀಟ್ ಹೆಚ್ಚಿಸಲಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಮಾಹಿತಿ ನೀಡಿದ್ದಾರೆ.