HomeBeautyದ್ರಾಕ್ಷಿ ಹಣ್ಣು ಬಳಸಿ ಮೊಡವೆ ಸಮಸ್ಯೆಯಿಂದ ಮುಕ್ತಿ ಹೊಂದಿ

ದ್ರಾಕ್ಷಿ ಹಣ್ಣು ಬಳಸಿ ಮೊಡವೆ ಸಮಸ್ಯೆಯಿಂದ ಮುಕ್ತಿ ಹೊಂದಿ

ದ್ರಾಕ್ಷಿಯು ಚರ್ಮದ ಆರೋಗ್ಯಕ್ಕೆ ಬಹಳ ಉಪಯೋಗಕಾರಿ. ಇದು ಮೊಡವೆಗಳಿಗೆ ಪರಿಣಾಮಕಾರಿಯಾದ ಚಿಕಿತ್ಸೆ ನೀಡುತ್ತದೆ. ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕುತ್ತದೆ.

ಹಾಗೇ ದ್ರಾಕ್ಷಿ ಹಣ್ಣಿನಲ್ಲಿ ವಿಟಮಿನ್ ಎ, ಸಿ ಸಮೃದ್ಧವಾಗಿರುತ್ತದೆ. ಈ ಹಣ್ಣಿನ ಸಿಪ್ಪೆಯಿಂದ ಮುಖಕ್ಕೆ ಸ್ಕ್ರಬ್ ಮಾಡಿದರೆ ನಿಮ್ಮ ಮುಖದ ಮೊಡವೆಗಳನ್ನು ನಿವಾರಿಸಬಹುದು ಜತೆಗೆ ಚರ್ಮದ ಒಡಕು ಸಮಸ್ಯೆಯನ್ನು ನಿವಾರಿಸುತ್ತದೆ.

ದ್ರಾಕ್ಷಿ ಹಣ್ಣಿನ ಸಿಪ್ಪೆಗೆ ಸಕ್ಕರೆ ಮತ್ತು 3 ಚಮಚ ಬಾದಾಮಿ ಎಣ್ಣೆ ಸೇರಿಸಿ ಮಿಕ್ಸಿಯಲ್ಲಿ ಮಿಶ್ರಣ ಮಾಡಿ ಅದನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. ಇದನ್ನು ವಾರಕ್ಕೆ 2 ಬಾರಿ ಬಳಸಿ. ಇದರಿಂದ ಮೊಡವೆ ಸಮಸ್ಯೆ ದೂರವಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular