alex Certify BIG NEWS: ಇನ್ನು 15 – 20 ದಿನದಲ್ಲಿ ಸಿಎಂ ಬದಲಾವಣೆ, ಯಡಿಯೂರಪ್ಪ ಕೆಳಗಿಳಿತಾರೆ – ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ ಸಿದ್ಧರಾಮಯ್ಯ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇನ್ನು 15 – 20 ದಿನದಲ್ಲಿ ಸಿಎಂ ಬದಲಾವಣೆ, ಯಡಿಯೂರಪ್ಪ ಕೆಳಗಿಳಿತಾರೆ – ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ ಸಿದ್ಧರಾಮಯ್ಯ ಹೇಳಿಕೆ

ಬೆಂಗಳೂರು: ನನ್ನ ಪ್ರಕಾರ ಸಿಎಂ ಯಡಿಯೂರಪ್ಪ ಇನ್ನು 15 -20 ದಿನಗಳಲ್ಲಿ ಕೆಳಗಿಳಿಯಲಿದ್ದಾರೆ ಎಂದು  ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಬಿಹಾರ ಚುನಾವಣೆ ಮುಗಿಯುತ್ತಿದ್ದಂತೆ ಯಡಿಯೂರಪ್ಪ ಕೆಳಗಿಳಿಯುತ್ತಾರೆ. ನನಗೆ ಬಂದಿರುವ ಖಚಿತ ಮಾಹಿತಿಯ ಅನ್ವಯ ಇನ್ನು 15 – 20 ದಿನದಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂದು ಸಂದರ್ಶನವೊಂದರಲ್ಲಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಬಹಳ ದಿನ ಸಿಎಂ ಆಗಿ ಉಳಿಯುವುದಿಲ್ಲ ಎಂದು ಹೇಳಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ತಂದಿತ್ತು. ಆಗ ಬಿಜೆಪಿ ನಾಯಕರು ಇನ್ನು ಮೂರು ವರ್ಷ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು.

ಈಗ ಬಿ.ಎಸ್.ವೈ. ಕುರ್ಚಿಯ ಬಗ್ಗೆ ಸಿದ್ದರಾಮಯ್ಯ ಭವಿಷ್ಯ ನುಡಿದಿರುವುದು ಮತ್ತೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಬಿಹಾರ ಚುನಾವಣೆ ಮುಗಿದ ನಂತರ ಯಡಿಯೂರಪ್ಪ ಕೆಳಗಿಳಿಯಲಿದ್ದಾರೆ. ಬಿಜೆಪಿ ಸರ್ಕಾರ ಇರಬಹುದು ಇಲ್ಲವೇ ಕಚ್ಚಾಟದಿಂದಾಗಿ ಬೀಳಬಹುದು ಎಂದು ಸಿದ್ಧರಾಮಯ್ಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...