ಕಲಬುರಗಿ: ನ್ಯಾಷನಲ್ ಟೆಸ್ಟಿಂಗ್ ಏಜನ್ಸಿ(ಎನ್.ಟಿ.ಎ.)ಯು 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಸೈನಿಕ ಶಾಲೆಯಲ್ಲಿ 6ನೇ ತರಗತಿ ಹಾಗೂ 9ನೇ ತರಗತಿಗಳಲ್ಲಿ ಪ್ರವೇಶ ಪರೀಕ್ಷೆ(AISSEE-2021) ಮೂಲಕ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಹಿರಿಯ ನಿರ್ದೇಶಕರು ತಿಳಿಸಿದ್ದಾರೆ.
ಈ ಸೈನಿಕ ಶಾಲೆ ಪ್ರವೇಶ ಪರೀಕ್ಷೆಯು 2021 ರ ಜನವರಿ 10 ರಂದು ನಡೆಯಲಿದೆ. ಆಸಕ್ತಿಯುಳ್ಳ ಅರ್ಹ ವಿದ್ಯಾರ್ಥಿಗಳು https://aissee.nta.nic.in ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ 2020ರ ನವೆಂಬರ್ 19 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 400 ರೂ. ಹಾಗೂ ಇತರೆ ಎಲ್ಲ ವಿದ್ಯಾರ್ಥಿಗಳಿಗೆ 550 ರೂ. ಪರೀಕ್ಷಾ ಶುಲ್ಕ ಇರುತ್ತದೆ.
ಪರೀಕ್ಷಾ ಶುಲ್ಕ, ಪರೀಕ್ಷಾ ಪಠ್ಯಕ್ರಮ, ಸೈನಿಕ ಶಾಲೆಗಳ ಪಟ್ಟಿ, ತಾತ್ಕಾಲಿಕ ಪ್ರವೇಶ, ಸೀಟುಗಳ ಮೀಸಲು, ಪರೀಕ್ಷಾ ಕೇಂದ್ರಗಳ ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ www.nta.ac.in ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.