
ಹೈದರಾಬಾದ್: ಮದುವೆ ದಿಬ್ಬಣದ ವ್ಯಾನ್ ಬೆಟ್ಟದಿಂದ ಉರುಳಿಬಿದ್ದು 7 ಮಂದಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ನಡೆದಿದೆ.
ಮದುವೆ ಮುಗಿಸಿಕೊಂಡು ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ. ಬೆಟ್ಟದ ಮೇಲೆ ಸಾಗುತ್ತಿದ್ದ ವ್ಯಾನ್ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದೆ. ವ್ಯಾನ್ ಬೆಟ್ಟದಿಂದ ಉರುಳಿ ಬಿದ್ದಿದ್ದು 7 ಮಂದಿ ಮೃತಪಟ್ಟು ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.