ರಾಮನಗರ: ಸ್ನೇಹಿತನ ಪತ್ನಿಗೆ ಲೈಂಗಿಕ ಕಿರುಕುಳ ನೀಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿ ವಿರುದ್ಧ ದೂರು ದಾಖಲಾಗಿದೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ನಿವಾಸಿಯಾಗಿರುವ ಸಂತೋಷ್ ವಿರುದ್ಧ ದೂರು ದಾಖಲಿಸಲಾಗಿದೆ. ಮಹಿಳೆಯ ವಿಡಿಯೋ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿ ಸಂತೋಷ್ ಕುಮಾರ್ ವಿರುದ್ಧ ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.
ಸಂತೋಷ್ ಕುಮಾರ್ ಸ್ನೇಹಿತನ ಪತ್ನಿಗೆ ಲೈಂಗಿಕ ಕಿರುಕುಳ ನೀಡಿ ವಿಡಿಯೋ ಮಾಡಿಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ ಕೇಸ್ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.