ಪಾಕಿಸ್ತಾನ ಸಚಿವ ಪುಲ್ವಾಮಾ ದಾಳಿ ನಮ್ಮ ಸರ್ಕಾರದ ಸಾಧನೆ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಕಾಂಗ್ರೆಸ್ ಪಕ್ಷವನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಪುಲ್ವಾಮಾ ದಾಳಿ ವಿಚಾರದಲ್ಲಿ ಬಿಜೆಪಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ ಕಾಂಗ್ರೆಸ್ ಕ್ಷಮೆ ಯಾಚಿಸಬೇಕು ಅಂತಾ ಆಗ್ರಹಿಸಿದ್ದಾರೆ.
ಫೆಬ್ರವರಿ ತಿಂಗಳಲ್ಲಿ ಪುಲ್ವಾಮಾ ದಾಳಿ ನಡೆದು 1 ವರ್ಷದ ನೆನಪಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿಯನ್ನು ಟಾರ್ಗೆಟ್ ಮಾಡಿದ್ದರು. ಕೇಂದ್ರ ಸರ್ಕಾರ ಭದ್ರತಾ ಕೊರತೆ ಹಿನ್ನೆಲೆ ಈ ದಾಳಿ ನಡೆದಿದೆ. ಹೀಗಾಗಿ ಈ ದಾಳಿಯ ಹೊಣೆ ಯಾರು ಹೊರಬೇಕು ಅಂತಾ ಪರೋಕ್ಷವಾಗಿ ಬಿಜೆಪಿಗೆ ಟಾಂಗ್ ನೀಡಿದ್ದರು.
ರಾಹುಲ್ ಗಾಂಧಿ ಜೊತೆಯಲ್ಲಿ ಬಿ.ಕೆ. ಹರಿಪ್ರಸಾದ್, ಕರ್ನಾಟಕದ ಕೆಲ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು. ಪ್ರಧಾನಿ ಮೋದಿ ಪಾಕಿಸ್ತಾನದ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಅಂತಲೂ ಆರೋಪ ಮಾಡಲಾಗಿತ್ತು.
ಆದರೆ ಇದೀಗ ಪಾಕ್ ಸಚಿವ ಫವಾದ್ ಚೌಧರಿ ಪುಲ್ವಾಮಾ ದಾಳಿಯ ಹೊಣೆಯನ್ನ ಹೊತ್ತುಕೊಂಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪ್ರಕಾಶ್ ಜಾವ್ಡೇಕರ್, ಪಾಕಿಸ್ತಾನವೇ ಇದೀಗ ದಾಳಿಯ ಹೊಣೆಯನ್ನ ಹೊತ್ತುಕೊಂಡಿದೆ. ಸರಿಯಾದ ಮಾಹಿತಿಯಿಲ್ಲದೇ ಬಿಜೆಪಿ ವಿರುದ್ಧ ಇಲ್ಲಸಲ್ಲದ ಮಾತನಾಡಿದ ಕಾಂಗ್ರೆಸ್ ಕ್ಷಮೆಯಾಚಿಸುವಂತೆ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ